ಕೊಪ್ಪಳ:
ಅಂಗಡಿಯ ಕೆಲಸಕ್ಕೆ ಬರುತ್ತಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ವ್ಯಕ್ತಿಯೊಬ್ಬ ಬೆದರಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ವೀರೇಶ ನಾಯಕ ಅತ್ಯಾಚಾರವೆಸಗಿದ ಆರೋಪಿ, ವೀರೇಶ್ ಎಂಬಾತ ಎಲೆಕ್ಟ್ರಿಕ್ ಅಂಗಡಿ ಇಟ್ಟಿದ್ದು, ಇಲ್ಲಿ ಕೆಲಸಕ್ಕೆ ಬರುತ್ತಿದ್ದ ಯುವತಿ ಮೇಲೆ ಕೆಲವು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ.
ಇತ್ತೀಚಿಗೆ ಅಂಗಡಿಯ ಕೆಲಸಕ್ಕೆ ಬರುವುದಿಲ್ಲ ಎಂದು ಯುವತಿ ಹೋಗಿದ್ದಕ್ಕೆ ಆಕೆಗೆ ಹೆದರಿಸಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆಸಿಕೊಂಡು, ವಿಡಿಯೋ ಮಾಡಿಕೊಂಡಿದ್ದಾನೆ.ಸದ್ಯ, ಪ್ರಕರಣ ದಾಖಲಿಸಿಕೊಂಡಿರುವ ಕುಷ್ಟಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.