ಬೆಂಗಳೂರು:
ಸಂಸದ ಪ್ರಜ್ವಲ್ ರೇವಣ್ಣ ಅವರು ಮೇ 31ಕ್ಕೆ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್ ಆಗಲಿದ್ದಾರೆ ಈಗಾಗಲೇ ಮ್ಯೂನಿಕ್ನಿಂದ ಬೆಂಗಳೂರಿಗೆ ಬರೋಕೆ ಪ್ರಜ್ವಲ್ ರೇವಣ್ಣ ಅವರು ಲುಫ್ತಾನ್ಸಾ ಏರ್ಲೈನ್ಸ್ ಬುಕ್ ಮಾಡಿದ್ದಾರೆ. ಮೇ 31ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರ್ತಿದ್ದಂತೆ ಏರ್ ಪೋರ್ಟ್ನಲ್ಲೇ ಲಾಕ್ ಆಗುವ ಸಾಧ್ಯತೆಗಳಿವೆ. ಎಸ್ಐಟಿ ಅಧಿಕಾರಿಗಳು ಏರ್ಪೋರ್ಟ್ನಲ್ಲಿ ಬಂಧಿಸಲು ಸಜ್ಜಾಗಿದ್ದಾರೆ
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಸೋಮವಾರವಷ್ಟೇ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್ಐಟಿ (SIT) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದರು