ಬೆಂಗಳೂರು:
ಹಾಸನ ಅಶ್ಲೀಲ ಪೆನ್‌ಡ್ರೈವ್ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಜೂ. 10ಕ್ಕೆ ಮುಕ್ತಾಯಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 10ರ ವರೆಗೆ ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ವಿಚಾರಣೆ ನಡೆಸುತ್ತಿದೆ.ಅಶ್ಲೀಲ ವೀಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಮೂಲ ಮೊಬೈಲ್‌ಗಾಗಿ ಎಸ್‌ಐಟಿ ಹುಡುಕಾಟ ಮುಂದುವರಿಸಿದೆ. ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಆಪ್ತ ವಲಯದವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಲು ಎಸ್‌ಐಟಿ ಮುಂದಾಗಿದೆ.