ನವದೆಹಲಿ:
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ
ಮೋದಿ ಅವರು ಕಿಸಾನ್ ಸಮ್ಮನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ ಫೈಲ್‌ಗೆ ಸಹಿ ಹಾಕಿದರು
ಒಟ್ಟು 9.3 ಕೋಟಿ ರೈತರಿಗೆ ಹಣ ಸಿಗಲಿದೆ. ಮೋದಿ ಅವರು ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆಗೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. 4 ತಿಂಗಳಿಗೊಮ್ಮೆ 2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ
ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.