ದೊಡ್ಮನೆಯನ್ನು ಬಿಡದ ಡೈವೋರ್ಸ್‌ ಭೂತ ….!

ಬೆಂಗಳೂರು :

    ದೊಡ್ಮನೆ ಮಗ ಯುವರಾಜ್‌ಕುಮಾರ್ ಇದೀಗ ಪತ್ನಿ ಶ್ರೀದೇವಿಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಮಾನಸಿಕ ಕಿರುಕುಳ ಎಂದು ಆರೋಪಿಸಿ ಯುವರಾಜ್‌ಕುಮಾರ್ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಚಾರವಾಗಿ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ

     ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ. ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.

    7 ವರ್ಷಗಳು ಪ್ರೀತಿಸಿ ಮದುವೆಯಾಗಿದ್ದ  ಯುವ ಮತ್ತು ಶ್ರೀದೇವಿ ಜೋಡಿ ಈಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಜೂನ್ 6ರಂದು ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಯುವರಾಜ್‌ಕುಮಾರ್, ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ
    ಕಳೆದ 6 ತಿಂಗಳಿಂದ ಇಬ್ಬರ ಡಿವೋರ್ಸ್ ಸುದ್ದಿ ಹರಿದಾಡುತ್ತಿತ್ತು. ಕೆಲವು ತಿಂಗಳುಗಳಿಂದ ಜೊತೆಯಾಗಿ ಕೂಡ ವಾಸಿಸುತ್ತಿಲ್ಲ. ‘ಯುವ’ ಸಿನಿಮಾದ ಪ್ರಚಾರ ಕಾರ್ಯದಲ್ಲಿಯೂ ಕೂಡ ಶ್ರೀದೇವಿ ಭಾಗಿಯಾಗಿಲ್ಲ. ಸದ್ಯ ಯುವ ಪತ್ನಿ ವಿದೇಶದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link