ತುಮಕೂರು:
ಕವಿ ಕುಮಾರವ್ಯಾಸನ ಕರ್ಮಭೂಮಿಯಾದ ಗದಗ ಜಿಲ್ಲೆಯ ಲಕ್ಕುಂಡಿಯ ಹಾಲುಗೊಂಡ ಬಸವೇಶ್ವರ ದೇವಾಲಯದಲ್ಲಿ ಪ್ರಮುಖ ಶಿಲಾಶಾಸನವೊಂದು ಪತ್ತೆಯಾಗಿದೆ. ಈ ಶಾಸನವು ದೇವಾಲಯದ ಒಳಗೆ ನವರಂಗದ ಪೂರ್ವಭಾಗದ ಛತ್ತಿನ ತೊಲೆಯಲ್ಲಿ ಕಂಡುಬಂದಿದೆ.
ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಎಂ. ಕೊಟ್ರೇಶ್ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಸುಧಾ ಜೆ. ಅವರ ಸಂಶೋಧನೆಯಿಂದ ಈ ಶಾಸನದ ವಿವರಗಳು ಬೆಳಕಿಗೆ ಬಂದಿವೆ.