T20 World Cup 2024: ಕಿವೀಸ್ ಗೆ ವಿಂಡೀಸ್ ಆಘಾತ…..!

ಯಾನ: 

    ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡ 13ರನ್ ಗಳ ಭರ್ಜರಿ ಜಯ ಸಾಧಿಸಿ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿದೆ.

   ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು.

   ವಿಂಡೀಸ್ ಪರ ಶೆರ್ಫೇನ್ ರುದರ್ಫೋರ್ಡ್ ಅಜೇಯ 68 ರನ್ ಗಳಿಸಿ ತಂಡಕ್ಕೆ ನೆರವಾದರು. ಅಂತಿಮ ಹಂತದಲ್ಲಿ ಅಕೀಲ್ ಹೊಸೆನ್ (15 ರನ್), ರೆಸೆಲ್ (14ರನ್) ಮತ್ತು ರೊಮಾರಿಯೋ ಶೆಫರ್ಡ್ (13ರನ್) ಗಳಿಸಿದ ಸಮಯೋಚಿತ ಅಲ್ಪ ರನ್ ಗಳಿಕೆ ವಿಂಡೀಸ್ ತಂಡದ ಮೊತ್ತ 140ರನ್ ದಾಟುವಂತೆ ಮಾಡಿತು.

   ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಉತ್ತಮ ಆರಂಭ ಪಡೆಯಿತಾದರೂ ಮಧ್ಯಮ ಕ್ರಮಾಂಕದ ಕುಸಿತ ತಂಡಕ್ಕೆ ದುಬಾರಿಯಾಯಿತು. ಗ್ಲೇನ್ ಫಿಲಿಪ್ಸ್ ಗಳಿಸಿದ 40 ರನ್ ತಂಡವನ್ನು ಗೆಲುವಿನ ಹೊಸ್ತಿಸಿಗೆ ಸೇರಿಸಲು ಸಾಧ್ಯವಾಗಲಿಲ್ಲ. ಮಿಚೆಲ್ ಸ್ಯಾಂಟ್ನರ್ ಅಜೇಯ 21 ರನ್ ಗಳಿಸಿದರಾದರೂ ಅವರಿಗೆ ಉಳಿದ ಆಟಗಾರರಿಂದ ಸಾಥ್ ದೊರೆಯಲಿಲ್ಲ. ಅಂತಿಮವಾಗಿ ನ್ಯೂಜಿಲೆಂಡ್ ತಂಡ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 136 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ 13 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

    ಈ ಪಂದ್ಯದ ಗೆಲುವಿನ ಮೂಲಕ ವಿಂಡೀಸ್​ ‘ಸಿ’ ಗುಂಪಿನಿಂದ ಸೂಪರ್​-8ಗೆ ಪ್ರವೇಶ ಪಡೆಯಿತು. ಸತತ 2 ಸೋಲು ಕಂಡ ನ್ಯೂಜಿಲ್ಯಾಂಡ್​(New Zealand) ಟೂರ್ನಿಯಿಂದ ಬಹುತೇಕ ಹೊರಬೀಳುವ ಸ್ಥಿತಿಗೆ ಬಂದು ನಿಂತಿದೆ. ನಾಳೆ ನಡೆಯುವ ಪಂದ್ಯದಲ್ಲಿ ಅಫಘಾನಿಸ್ತಾನ ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ ಗೆದ್ದರೆ ಕಿವೀಸ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

   ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿರುವ ನ್ಯೂಜಿಲ್ಯಾಂಡ್‌ ಈ ರೀತಿಯ ಶೋಚನೀಯ ಸ್ಥಿತಿ ತಲುಪಿದ್ದು ಇದೇ ಮೊದಲು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap