ಲಾರಿ-ವ್ಯಾನ್ ಮುಖಾಮುಖಿ ಡಿಕ್ಕಿ: 5 ಸಾವು

ಆಂಧ್ರಪ್ರದೇಶ:

     ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ ವ್ಯಾನ್ ಚಾಲಕ, ಎದುರಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಘಟನೆ ಇಂದು (ಜೂ.14) ಮುಂಜಾನೆ ಸಂಭವಿಸಿದೆ.

    ಮೃತರು ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದವರು ಎಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟರು ಎಂದು ಮಚಲಿಪಟ್ಟಣಂ ಡಿಎಸ್ಪಿ ಸುಭಾನಿ ಹೇಳಿದ್ದಾರೆ. ಘಟನೆಯಲ್ಲಿ ಇನ್ನೂ ಐವರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. 

    ಅಪಘಾತದಿಂದಾಗಿ ಈ ಮಾರ್ಗದಲ್ಲಿ ಎರಡು ಕಿಲೋಮೀಟರ್ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅಪಘಾತದಲ್ಲಿ ಸಿಲುಕಿದವರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಮೃತಪಟ್ಟ ಆರು ಜನರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ,

Recent Articles

spot_img

Related Stories

Share via
Copy link