ಜಿಎಸ್ ಟಿ ಜಾರಿ ನಂತರ ರಾಜ್ಯಗಳ ಆದಾಯಕ್ಕೆ ಕೊಕ್ಕೆ : ಸಿದ್ದರಾಮಯ್ಯ

ಬೆಂಗಳೂರು:

    ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಜಿಎಸ್ ‌ಟಿ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಅವಕಾಶ ಸೀಮೀತಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

     ತಮ್ಮ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿ, ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರ ಯಾವುದೇ ಮೂಲಗಳು ಉಳಿದಿಲ್ಲ.

    ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.

    ಈ ಬದಲಾವಣೆಯ ನಂತರವೂ ದಕ್ಷಿಣ ಬಾರತದ ಇತರೆ ರಾಜ್ಯಗಳು ಹಾಗೂ ಬಿಜೆಪಿ ಆಡಲಿತದಲ್ಲಿರುವ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ ಎಂದು ಬರೆದಿದ್ದಾರೆ.ಈ ಪೊಸ್ಟ್‌ಗೆ ಬಿಜೆಪಿಯನ್ನು ಟ್ಯಾಗ್‌ ಮಾಡಿದ್ದಾರೆ. ಜೊತೆಗೆ ಬೇರೆ ಬೇರೆ ದಿನಪತ್ರಿಕೆಗಳಲ್ಲಿ ಬಂದ ವರದಿಗಳ ಫೊಟೋ ಶೇರ್‌ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap