ದರ್ಶನ್‌ ಬಂಧನ : ಕೊನೆಗೂ ಮೌನ ಮುರಿದ ರಚಿತಾ ರಾಮ್

ಬೆಂಗಳೂರು:

    ನಟ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದೆ. ಈ ಪ್ರಕರಣದ ಬಗ್ಗೆ ಹಲವು ದಿನಗಳ ಬಳಿಕ ನಟಿ ರಚಿತಾ ರಾಮ್ ಮೌನ್ ಮುರಿದಿದ್ದಾರೆ. ಏನು ಅಂತ ಹೇಳಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.

   ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.ಈ ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಿ ಸ್ಛಳ ಮಹಜರು ಕೂಡ ಮನಡೆಸುತ್ತಿದ್ದಾರೆ.

   ಇತ್ತ ನಟಿ ರಚಿತಾ ರಾಮ್ ಕೂಡ ನಟ ದರ್ಶನ್ ಅರೆಸ್ಟ್ ಬಗ್ಗೆ ಮೌನ ಮುರಿದು ಮಾತನಾಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿರುವಂತ ಅವರು, ಏನು ಬರೆದಿದ್ದಾರೆ ಅಂತ ಮುಂದೆ ಓದಿ.

ನಮಸ್ಕಾರ

   ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು!

   ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

   ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಶ್ಚಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ ಅಂತ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link