ಬೆಂಗಳೂರು :
ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪೋಷಕರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.
ಸಿಎಂ ಸಿದ್ದರಾಮಯ್ಯ ಬಳಿ ಮಾತನಾಡಿದ ರೇಣುಕಾಸ್ವಾಮಿ ಪೋಷಕರು ‘ ನನ್ನ ಮಗ ಏನಾದ್ರೂ ತಪ್ಪು ಮಾಡಿದ್ರೆ ಕರೆದು ಬುದ್ದಿ ಹೇಳಬಹುದಿತ್ತು, ಆದರೆ ಅವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಕಣ್ಣೀರಿಟ್ಟರು.ತಮ್ಮ ಕುಟುಂಬದ ಮುಂದಿನ ಭವಿಷ್ಯವನ್ನು ನೆನೆದು ಕಣ್ಣೀರಿಟ್ಟ ಕುಟುಂಬ ನಮ್ಮ ಸೊಸೆಗೆ ಒಂದು ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಕೂಡ ಉದ್ಯೋಗ ನೀಡುವ ಭರವಸೆ ನೀಡಿದರು ಎನ್ನಲಾಗಿದೆ.
