ಹತ್ರಾಸ್:
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ.
“ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಅನೇಕ ಗಾಯಾಳುಗಳನ್ನು ಸಹ ದಾಖಲಿಸಲಾಗಿದೆ. ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ