ಭಾರತ ಮತ್ತು ಆಸ್ಟ್ರಿಯಾ ನಡುವೆ ಉತ್ತಮ ಸಂಬಂಧವಿದೆ : ಮೋದಿ

ವಿಯೆನ್ನಾ:

    ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರೊಂದಿಗೆ ಉಕ್ರೇನ್ ಸಂಘರ್ಷ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿ ಸೇರಿದಂತೆ ಜಗತ್ತಿನ ಇತರ ಸಂಘರ್ಷಗಳ ಕುರಿತು “ವಿವರವಾದ ಫಲಪ್ರದ ಚರ್ಚೆ” ನಡೆಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

   ಎರಡು ದಿನಗಳ ಭೇಟಿಗಾಗಿ ಮಂಗಳವಾರ ರಾತ್ರಿ ರಷ್ಯಾ ಆಗಮಿಸಿರುವ ಪ್ರಧಾನಿ ಮೋದಿ, ಭಾರತ ಮತ್ತು ಆಸ್ಟ್ರಿಯಾ ಪರಸ್ಪರ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಹೊಸ ಸಾಧ್ಯತೆಗಳನ್ನು ಗುರುತಿಸಿವೆ ಮತ್ತು ಮುಂಬರುವ ದಶಕದ ಸಹಕಾರಕ್ಕಾಗಿ ಒಂದು ನೀಲನಕ್ಷೆ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

   “ಇಂದು, ಚಾನ್ಸೆಲರ್ ನೆಹಮ್ಮರ್ ಮತ್ತು ನಾನು ಫಲಪ್ರದವಾದ ಚರ್ಚೆ ನಡೆಸಿದ್ದೇವೆ. ನಮ್ಮ ಪರಸ್ಪರ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಾವು ಹೊಸ ಸಾಧ್ಯತೆಗಳನ್ನು ಗುರುತಿಸಿದ್ದೇವೆ. ನಮ್ಮ ಸಂಬಂಧಕ್ಕೆ ಕಾರ್ಯತಂತ್ರದ ನಿರ್ದೇಶನವನ್ನು ನೀಡಲು ನಾವು ನಿರ್ಧರಿಸಿದ್ದೇವೆ. ಮುಂಬರುವ ದಶಕದ ಸಹಕಾರಕ್ಕಾಗಿ ನೀಲನಕ್ಷೆಯನ್ನು ಸಿದ್ಧಪಡಿಸಲಾಗಿದೆ” ಎಂದು ಪ್ರಧಾನಿ ಮೋದಿ ಅವರು ಚಾನ್ಸೆಲರ್ ನೆಹಮ್ಮರ್ ಅವರ ಮಾತುಕತೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

   “ಚಾನ್ಸೆಲರ್ ನೆಹಮ್ಮರ್ ಮತ್ತು ನಾನು ಪ್ರಪಂಚದಾದ್ಯಂತ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದೇವೆ. ಅದು ಉಕ್ರೇನ್‌ ಸಂಘರ್ಷ ಅಥವಾ ಪಶ್ಚಿಮ ಏಷ್ಯಾದ ಪರಿಸ್ಥಿತಿಯಾಗಿರಬಹುದು. ಇದು ಯುದ್ಧದ ಸಮಯವಲ್ಲ ಎಂದು ನಾನು ಮೊದಲೇ ಹೇಳಿದ್ದೇನೆ” ಎಂದು ಪ್ರಧಾನಿ ಮೋದಿ ತಿಳಿಸಿದರು.

   ಸಮಸ್ಯೆಗಳಿಗೆ ಯುದ್ಧಭೂಮಿಯಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಮೋದಿ, ಭಾರತ ಮತ್ತು ಆಸ್ಟ್ರಿಯಾ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತವೆ ಮತ್ತು ಅದಕ್ಕಾಗಿ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ಸಿದ್ಧ ಎಂದು ಹೇಳಿದರು.

   ಭಾರತ ಮತ್ತು ಆಸ್ಟ್ರಿಯಾ ಎರಡೂ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತವೆ ಮತ್ತು ಎಲ್ಲೇ ಆದರೂ ಅಮಾಯಕರ ಹತ್ಯೆಯನ್ನು ಒಪ್ಪಕೊಳ್ಳಲು ಸಾಧ್ಯವಿಲ್ಲ. ಭಾರತ ಮತ್ತು ಆಸ್ಟ್ರಿಯಾ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡುತ್ತವೆ ಮತ್ತು ಅದಕ್ಕಾಗಿ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು ನಾವು ಒಟ್ಟಿಗೆ ಸಿದ್ಧರಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

  ಪ್ರಧಾನಿ ಮೋದಿಯವರ ಮಾತಿಗೆ ಧ್ವನಿಗೂಡಿಸಿದ ಆಸ್ಟ್ರಿಯಾ ಚಾನ್ಸೆಲರ್ ನೆಹಮ್ಮರ್ ಅವರು, ಆಸ್ಟ್ರಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧವನ್ನು ಎತ್ತಿ ತೋರಿಸಿದರು.”ಭಾರತ ಮತ್ತು ಆಸ್ಟ್ರಿಯಾ ನಡುವೆ ಉತ್ತಮ ಸಂಬಂಧವಿದೆ. ಇದು 1950 ರ ದಶಕದಲ್ಲಿ ಪ್ರಾರಂಭವಾದ ನಂಬಿಕೆಯ ಸಂಬಂಧವಾಗಿದೆ… ಭಾರತವು ಆಸ್ಟ್ರಿಯಾಕ್ಕೆ ಸಹಾಯ ಮಾಡಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap