ಬೆಂಗಳೂರು
ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆ ಮಾತ್ರವಲ್ಲದೇ ನಟನೆ ಮೂಲಕವೂ ಅಪರ್ಣಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು.
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.
