ಉಡುಪಿಯಲ್ಲಿ ಅಗ್ನಿ ಅವಘಡ : ಶೆಟ್ಟಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಮಾಲೀಕ ಸಾವು

ಉಡುಪಿ:

   ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

   ಅಂಬಲಪಾಡಿಯ ಶೆಟ್ಟಿ ಲಂಚ್ ಹೋಮ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ (50) ಮೃತ ವ್ಯಕ್ತಿಯಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

   ಇವರ ಪುತ್ರ ಹಾಗೂ ಪುತ್ರಿ ಸ್ನಾನದ ಕೋಣೆಯಲ್ಲಿ ಆಶ್ರಯ ಪಡೆದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.ಮನೆಯೊಳಗಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸಮೀಪ ನಿವಾಸಿಗಳು ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದರು.

    ಅಗ್ನಿ ಶಾಮಕ ದಳದ ಸಿಬ್ಬಂದಿ ಮನೆಯ ಬಾಗಿಲು ಮುರಿದು ಒಳಗಿದ್ದವರನ್ನು ಹೊರಗೆ ಕರೆತಂದಿದ್ದಾರೆ. ಈ ವೇಳೆ ರಮಾನಂದ ಶೆಟ್ಟಿ ಮತ್ತು ಅಶ್ವಿನಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ತಿಳಿದುಬಂದಿದೆ.ಮೂರು ಅಂತಸ್ತಿನ ಮನೆಯೊಳಗಿನ ವಸ್ತುಗಳು ಸುಟ್ಟು ಕರಕಲಾಗಿವೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

   ಬೆಳಗಿನ ಜಾವ 5.40ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು. ಬೆಂಕಿಯ ಕೆನ್ನಾಲಿಗೆಗೆ ಮನೆಯ ನೆಲಮಹಡಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ಮೂಲಗಳು ತಿಳಿಸಿವೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link