ಬೆಂಗಳೂರು:
ಕೊಲೆ ಪ್ರಕರಣದಲ್ಲಿ ಕಳೆದ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್ ವುಡ್ ಖ್ಯಾತ ಸಿನಿಮಾ ನಿರ್ದೇಶಕನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಗಜೇಂದ್ರ ಅಲಿಯಾಸ್ ಗಜನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಗಜೇಂದ್ರ ಈ ಹಿಂದೆ ಕನ್ನಡದಲ್ಲಿ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಸದ್ಯ ಸಿಸಿಬಿ ಪೊಲೀಸರು ಗಜೇಂದ್ರನನ್ನು ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ. ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ. ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇದೀಗ 20 ವರ್ಷಗಳ ಬಳಿಕ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ