ಪುಣೆ:
ಮಹಾರಾಷ್ಟ್ರದ ಪುಣೆಯಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್ ವರದಿಯಾಗಿದ್ದು, ವೇಗವಾಗಿ ಬಂದ ಕಾರೊಂದು ಬೈಕ್ ಗೆ ಢಿಕ್ಕಿಯಾದ ಪರಿಣಾಮ ದಂಪತಿ 10 ಅಡಿ ಮೇಲಕ್ಕೆ ಹಾರಿದ ಘಟನೆ ನಡೆದಿದೆ.
ಪುಣೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಗುರುವಾರ ಈ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ದಂಪತಿ ಬೈಕ್ ಗೆ ವೇಗವಾಗಿ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ.ಕಾರು ಢಿಕ್ಕಿಯಾದ ರಭಸಕ್ಕೆ ಬೈಕ್ ನಲ್ಲಿದ್ದ ದಂಪತಿ 10 ಮೇಲೆ ಹಾರಿ ಕೆಳಗೆ ಬೀಳುತ್ತಾರೆ. ಇವಿಷ್ಟೂ ವಿಡಿಯೋ ಹೆದ್ದಾರಿ ಸಮೀಪದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.
ಅಪಘಾತವಾಗುತ್ತಿದ್ದಂತೆಯೇ ಕಾರು ಚಾಲಕ ಅಲ್ಲಿಂದ ಕಾರು ಸಮೇತ ಪರಾರಿಯಾಗಿದ್ದು, ರಸ್ತೆ ಮೇಲೆ ಬಿದ್ದು ಗಾಯಗೊಂಡಿದ್ದ ದಂಪತಿಗಳನ್ನು ಸ್ಥಳೀಯರು ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ .ಅಂತೆಯೇ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.