ನವದೆಹಲಿ:
ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಲೋಕಸಭೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಮೋದಿ 3.0 ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ನ್ನೂ ಸೇರಿ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.
ಎಲ್ಲಾ ವಿಭಾಗಗಳಲ್ಲಿ ತೆರಿಗೆದಾರರಿಗೆ ಲಾಭದಾಯಕವಾಗುವಂತೆ ಆದಾಯ ತೆರಿಗೆ ರಚನೆಯಲ್ಲಿನ ಬದಲಾವಣೆಗಳ ಮೇಲೆ ಮತ್ತು ಭಾರತದಲ್ಲಿ ಸುಲಭವಾಗಿ ವ್ಯಾಪಾರ ಮಾಡುವುದನ್ನು ಸುಧಾರಿಸುವ ಕುರಿತು ಬಜೆಟ್ ನಲ್ಲಿ ಮಂಡನೆ ಸಾಧ್ಯತೆಯಿದೆ.
ನಿರ್ಮಲಾ ಸೀತಾರಾಮನ್ ಅವರ ಸತತ ಏಳನೇ ಕೇಂದ್ರ ಬಜೆಟ್ ಮಂಡನೆ ಇದು ಆಗಿರುವುದರಿಂದ, ಈ ಹಿಂದೆ ಸತತ ಆರು ಬಾರಿ ಬಜೆಟ್ ಮಂಡಿಸಿದ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಮೀರಿಸುತ್ತಾರೆ.
ಕೇಂದ್ರ ಬಜೆಟ್ ಭಾಷಣ ಮಂಡನೆ ಕೇಂದ್ರ ಸರ್ಕಾರ ನಿರ್ವಹಿಸುವ ಸಂಸದ್ ಟಿವಿ ಮತ್ತು ದೂರದರ್ಶನ ಟಿವಿ ವಾಹಿನಿಗಳಲ್ಲಿ ನೇರ ಪ್ರಸಾರ ಇರುತ್ತದೆ. ಈ ವಾಹಿನಿಗಳ ಯೂಟ್ಯೂಬ್ ಚಾನಲ್ಗಳಲ್ಲೂ ನೇರ ಪ್ರಸಾರ ಇರುತ್ತದೆ. ಇಂಡಿಯಾ ಬಜೆಟ್ ವೆಬ್ಸೈಟ್ನಲ್ಲೂ ಲೈವ್ ಸ್ಟ್ರೀಮ್ ಇರುತ್ತದೆ.