ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ತೀವ್ರ ಅನ್ಯಾಯ: ನೀತಿ ಆಯೋಗದ ಸಭೆ ಬಹಿಷ್ಕರಿಸಿದ ಸಿಎಂ

ಬೆಂಗಳೂರು:

     ಕೇಂದ್ರ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರದ ಈ ತಾರತಮ್ಯ ನೀತಿಯನ್ನು ಖಂಡಿಸಿ ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮುಖ್ಯಮಂತ್ರಿ, 2024-25ರ ಸಾಲಿನ ಬಜೆಟ್ ನೋಡಿದ ನಂತರ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ.

    ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ.

    ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ ಎಂದು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link