ಡಾಪ್ಲರ್ ವೆದರ್ ರಾಡಾರ್ ಸ್ಥಾಪನೆಗೆ ಅಧಿಕಾರಿಗಳನ್ನು ಸ್ಥಳ ಪರಿಶೀಲನೆ

ಬೆಂಗಳೂರು:

    ಕರ್ನಾಟಕ ಕೊನೆಗೂ ಇದೇ ವರ್ಷ ತನ್ನದೇ ಆದ ಡಾಪ್ಲರ್ ವೆದರ್ ರಾಡಾರ್ ಹೊಂದಲಿದೆ. ಇದನ್ನು ಬೆಂಗಳೂರಿನಿಂದ 62 ಕಿಮೀ ದೂರದಲ್ಲಿರುವ ನಂದಿ ಬೆಟ್ಟದ ಮೇಲೆ ಸ್ಥಾಪಿಸಲಾಗುತ್ತಿದೆ.

    “ಎಲ್ಲವೂ ಅಂದುಕೊಂಡಂತೆ ನಡೆದರೆ (ಬಾಕಿ ಉಳಿದಿರುವ ಮಣ್ಣು ಪರೀಕ್ಷೆಯ ಫಲಿತಾಂಶಗಳು) DWR ಸ್ಥಾಪಿಸುವ ಕೆಲಸ ಎರಡು ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಎನ್ ಪುವಿಯರಸನ್  ತಿಳಿಸಿದರು.

    IMD ಅಧಿಕಾರಿಗಳ ತಂಡ ತೋಟಗಾರಿಕೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಜೊತೆಗೆ 10 ದಿನಗಳ ಹಿಂದೆ ನಂದಿ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಲ್ಕು ಸೈಟ್‌ಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ.

    ಮಣ್ಣು ಪರೀಕ್ಷೆಗೆ ಮಾದರಿಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಒಂದೂವರೆ ತಿಂಗಳ ನಂತರ ಫಲಿತಾಂಶ ತಿಳಿಯಲಿದೆ.

Recent Articles

spot_img

Related Stories

Share via
Copy link
Powered by Social Snap