ಬೆಂಗಳೂರು
ಅಪಾಯಕಾರಿ ಚಾಲನೆಗೆ ಕಡಿವಾಣ ಹಾಕುವುದಕ್ಕೆ ಕಠಿಣ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಸಂಚಾರ ಪೊಲೀಸರು ಜೂನ್ ಅಂತ್ಯದವರೆಗೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 6,283 ಪ್ರಕರಣ ಮತ್ತು ವ್ಹೀಲಿಂಗ್ ಸಂಬಂಧ 225 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಂಕಿಅಂಶಗಳ ಪ್ರಕಾರ, ಕಳೆದ ವರ್ಷ ನಗರದಲ್ಲಿ 216 ವ್ಹೀಲಿಂಗ್ ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಜೂನ್ನಲ್ಲಾಗಲೇ ಅದನ್ನು ಮೀರಿ ಪ್ರಕರಣಗಳು ದಾಖಲಾಗಿವೆ. ಟ್ರಾಫಿಕ್ ಪೊಲೀಸರು 93 ಸವಾರರ ನೋಂದಣಿ ಪ್ರಮಾಣಪತ್ರಗಳನ್ನು (ಆರ್‌ಸಿ) ಅಮಾನತಿಗಾಗಿ ಆಯಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಕಳುಹಿಸಿದ್ದು, ಅದರಲ್ಲಿ 26 ಆರ್ಸಿಗಳನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ.
2023ರಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದೆ 7,053 ಪ್ರಕರಣಗಳು ದಾಖಲಾಗಿದ್ದವು. ನಿಯಮ ಉಲ್ಲಂಘಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆಗಳಿಂದಾಗಿ ಈ ವರ್ಷದ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಂಎನ್ ಅನುಚೇತ್ ಹೇಳಿದ್ದಾರೆ.ಪೊಲೀಸರು 1,263 ಡ್ರೈವಿಂಗ್ ಲೈಸೆನ್ಸ್ಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಮದ್ಯಪಾನ ಮಾಡಿ ಚಾಲನೆ ಪ್ರಕರಣಗಳಲ್ಲಿ ಅಮಾನತುಗೊಳಿಸಲು ಐದು ಆರ್ಸಿಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಕಳುಹಿಸಿದ್ದಾರೆ.
