ಮಾರುಕಟ್ಟೆಗೆ ಬಂತು ಮೋಟೋ G85 ಹಾಗೂ G65 5Gಸರಣಿ : ವಿಶೇಷತೆ ಏನು ಗೊತ್ತಾ…?

ಮುಂಬೈ

   ಜಗತ್ತಿನ ಮೊಬೈಲ್‌ ಮಾರುಕಟ್ಟೆಯಲ್ಲಿ ಎಲೆ ಮರೆಕಾಯಿ ಯಾಗಿರುವ ಮೊಟೊರೊಲಾ ಈಗ ದೇಶಿ ಮಾರುಕಟ್ಟೆಗೆ ಕಡಿಮೆ ಬೆಲೆಯ 5G  ಪರಿಚಯಿಸಿದೆ. ಮೊಟೊ G ಸರಣಿ, ಮೊಟೊ ಎಡ್ಜ್‌ ಸರಣಿಯ ಫೋನ್‌ಗಳು ಆಕರ್ಷಕ ಎನಿಸಿಕೊಂಡಿವೆ.

   ಬಜೆಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇರುವ ಕೆಲವು ಮೊಬೈಲ್‌ಗಳಿಗೆ ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ ಅಧಿಕ. ಈ ನಿಟ್ಟಿನಲ್ಲಿ ಮೊಟೊ G ಸರಣಿ ಮೊಬೈಲ್‌ಗಳು ಬಜೆಟ್‌ ದರದಲ್ಲಿ ಗಮನ ಸೆಳೆದಿವೆ.

  ಮೊಟೊರೊಲಾ ಮೊಬೈಲ್‌ ಸಂಸ್ಥೆಯ ಇತ್ತೀಚಿನ ಮೊಟೊ G85 5G ಫೋನ್‌ ಹಾಗೂ ಮೊಟೊ G65 5G ಫೋನ್‌ ಮೊಬೈಲ್‌ಗಳು ಆಕರ್ಷಕ ಫೀಚರ್ಸ್‌ನಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಅಲ್ಲದೇ ಇವುಗಳು ಬಜೆಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಇವುಗಳ ಡಿಸೈನ್‌ ಸಹ ಆಕರ್ಷಕ ಎನಿಸಿದೆ. 

   ಮೊಟೊ G85 5G ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಹಾಗೆಯೇ ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದದಲ್ಲಿ ಕೆಲಸ ನಿರ್ವಹಣೆ ಮಾಡಲಿದ್ದು, ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಹಾಗೆಯೇ ಈ ಮೊಬೈಲ್‌ 8GB RAM + 128GB ಹಾಗೂ 12GB RAM + 256GB ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

   ಇನ್ನು ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದುಕೊಂಡಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 33W ಟರ್ಬೋಪವರ್‌ ಫಾಸ್ಟ್‌ ಚಾರ್ಜಿಂಗ್‌ ಆಯ್ಕೆ ಒಳಗೊಂಡಿದೆ. 

   ಮೊಟೊ G64 5G ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LCD ಅನ್ನು ಡಿಸ್‌ಪ್ಲೇ ಹೊಂದಿದ್ದು, ಈ ಫೋನಿನ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಜೊತೆಗೆ 8GB + 128GB ಸ್ಟೋರೇಜ್‌ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆಗಳನ್ನು ಪಡೆದಿದೆ.

  ಅಲ್ಲದೇ ಇದು ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದುಕೊಂಡಿದ್ದು, ಇದು ಪ್ಲಸ್‌ ಪಾಯಿಂಟ್‌ ಎನಿಸಿದೆ. ಇದಕ್ಕೆ ಪೂರಕವಾಗಿ 33W ಟರ್ಬೋ ಪವರ್‌ ಚಾರ್ಜಿಂಗ್ ಸೌಲಭ್ಯ ಸಹ ಒದಗಿಸಲಾಗಿದೆ. 

   ಮೊಟೊ G34 5G ಮೊಬೈಲ್‌ 6.5 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದು ಪಂಚ್-ಹೋಲ್ ವಿನ್ಯಾಸದೊಂದಿಗೆ ಫ್ಲಾಟ್ ಡಿಸ್‌ಪ್ಲೇ ಎನಿಸಿಕೊಂಡಿದೆ. ಇದರೊಂದಿಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಒಳಗೊಂಡಿದೆ.

 

Recent Articles

spot_img

Related Stories

Share via
Copy link
Powered by Social Snap