ಬೆಂಗಳೂರಿನಲ್ಲಿ ಭಾರಿ ಮಳೆ : ಕೊಂಬೆ ಬಿದ್ದು 6 ಜನರಿಗೆ ಗಾಯ

ಬೆಂಗಳೂರು

  ಬೆಂಗಳೂರಲ್ಲಿ ಸೋಮವಾರ ಬೆಳಗ್ಗೆ ಹಾಗೂ ರಾತ್ರಿ ಸುರಿದ ಮಳೆಗೆ ಸಂಕಷ್ಟಗಳ ಪ್ರವಾಹವೇ ಸೃಷ್ಟಿಯಾಗಿತ್ತು. ಮಾರುತಿ ಸೇವಾನಗರದಲ್ಲಿ ಬೃಹತ್ ಮರದ ಕೊಂಬೆ ಪಾದಚಾರಿಗಳ ಮೇಲೆ ಬಿದ್ದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸೇರಿ 6 ಮಂದಿ ಗಾಯಗೊಂಡಿದ್ದಾರೆ. ಮಹಿಳೆಯೊಬ್ಬರ ಕಾಲು ಮುರಿದಿದೆ. ಓರ್ವ ವ್ಯಕ್ತಿಯ ಎದೆಗೆ ಪೆಟ್ಟಾಗಿದ್ದು ಬೆನ್ನುಮೂಳೆ ಮುರಿದಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಆರೋಗ್ಯ ವಿಚಾರಿಸಿದ್ದಾರೆ. 

   ಕುಂದಲಹಳ್ಳಿಯಿಂದ ವರ್ತೂರು ಸಂಪರ್ಕಿಸುವ ರಸ್ತೆ ಕೆಸರು ಗದ್ದೆಯಂತೆ ಆಗಿತ್ತು. ರಸ್ತೆಯಲ್ಲಿ 2 ಅಡಿ ನೀರು ನಿಂತು 2 ಕಿಲೋ ಮೀಟರ್​ವರೆಗೆ ವಾಹನ ಸವಾರರು ಸರ್ಕಸ್ ಮಾಡಿದರು. ಇತ್ತ ಸಿಲ್ಕ್​ಬೋರ್ಡ್ ಜಂಕ್ಷನ್​ನಲ್ಲಿ ರಾಜಕಾಲುವೆ ತುಂಬಿ ನೀರು ರಸ್ತೆಗೆ ನುಗ್ಗಿತ್ತು. ಟ್ರಾಫಿಕ್ ಜಾಮ್​ನಲ್ಲಿ ಸವಾರರು ಹೈರಾಣಾದರು. 

   ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಆಗೋ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

  ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಮಳೆ ಕಡಿಮೆಯಾಗಿದ್ದರಿಂದ ಗಂಗಾವಳಿ ನದಿ ನದಿ ನೀರಿನ ರಭಸ ತಗ್ಗಿದೆ. ನೌಕಾದಳದ ರಾಡಾರ್ ಸರ್ಚ್ ಮೂಲಕ ಮತ್ತೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಣ್ಮರೆಯಾದ ಮೂವರಿಗಾಗಿ ಶೋಧ ಕಾರ್ಯ ನಡೆಯಲಿದೆ. ನೌಕಾ ದಳ, ಎನ್​​ಡಿಆರ್​ಎಫ್ ಹಾಗೂ ಎಸ್​​ಡಿಆರ್​ಎಫ್ ತಂಡಗಳು ಕಾರ್ಯಾಚರಣೆ ನಡೆಸಲಿವೆ.

Recent Articles

spot_img

Related Stories

Share via
Copy link