‘ಕಲ್ಕಿ 2898 ಎಡಿ’ ಒಟಿಟಿ ರಿಲೀಸ್ ಬಗ್ಗೆ ಫ್ಯಾನ್ಸ್​ಗೆ ಗುಡ್ ನ್ಯೂಸ್

ಚೆನ್ನೈ :

    ‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮಾಡಿದ ಗಳಿಕೆ ಬರೋಬ್ಬರಿ 1100 ಕೋಟಿ ರೂಪಾಯಿ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡಲು ರೆಡಿ ಆಗಿದೆ ಎಂದು ವರದಿ ಆಗಿದೆ. ಆಗಸ್ಟ್ 23ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಥಿಯೇಟರ್​​ನಲ್ಲಿ ಮಿಸ್ ಮಾಡಿಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದು.

    ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ನಟಿಸಿದ್ದಾರೆ. ಈ ಸಿನಿಮಾ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾದಲ್ಲಿ ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದಿಂದ ಪ್ರಭಾಸ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾನ ಈಗ ಒಟಿಟಿಯಲ್ಲಿ ನೋಡಬೇಕು ಎಂದುಕೊಂಡವರಿಗೆ ಗುಡ್​ ನ್ಯೂಸ್ ಸಿಕ್ಕಿದೆ.

   ‘ಕಲ್ಕಿ 2898 ಎಡಿ’ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿದೆ. ಈ ಸಿನಿಮಾದ ಹಿಂದಿ ವರ್ಷನ್ ಹಕ್ಕು ನೆಟ್​ಫ್ಲಿಕ್ಸ್ ಕೈ ಸೇರಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ವರ್ಷನ್ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿರಲಿದ್ದು, ಹಿಂದಿ ವರ್ಷನ್ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಕಾಣಲಿದೆ. ಎರಡೂ ಒಂದೇ ದಿನ ಪ್ರದರ್ಶನ ಕಾಣಲಿದೆ. 

    ಕಳೆದ ವಾರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಒಟಿಟಿಯಲ್ಲಿ ಪ್ರಸಾರ ಕಂಡಿದೆ. ಈಗ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆದ ಸುಮಾರು ಎರಡು ತಿಂಗಳ ಬಳಿಕ ಒಟಿಟಿಗೆ ಕಾಲಿಡುತ್ತಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link