ಮೈಸೂರು:
ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ. ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಪರೋಕ್ಷವಾಗಿ ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂದು ಹೇಳಿದರು. ಮೈಸೂರು ಅರಮನೆಯಲ್ಲಿ ಸಂಪ್ರದಾಯದಂತೆ ಖಾಸಗಿ ದಸರಾವನ್ನು ಮೈಸೂರು ರಾಜಮನೆತನದವರು ನಡೆಸಲಿದ್ದಾರೆ. ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.ಬಿಜೆಪಿ ಮತ್ತು ಜೆಡಿಎಸ್‌ನ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ. ಪಕ್ಷದಲ್ಲಿನ ಬಂಡಾಯ ಚಟುವಟಿಕೆಗಳ ಬಗ್ಗೆ ನನಗೇನೂ ಗೊತ್ತಿಲ್ಲ. ಎಲ್ಲರಿಗೂ ನನ್ನ ಸಲಹೆ ಏನೆಂದರೆ ನಾವು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಅವರು ಹೇಳಿದರು.
ಯಾವುದೇ ಬದಲಾವಣೆಗಳಿಲ್ಲದೆ ಖಾತರಿ ಯೋಜನೆಗಳನ್ನು ಮುಂದುವರಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಖಾತ್ರಿ ಯೋಜನೆಗಳ ಭರವಸೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ, ಅದು ಯೋಜನೆಗಳನ್ನು ಮಾರ್ಪಡಿಸಬಾರದು ಎಂದು ಅವರು ಹೇಳಿದರು. ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಯನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಯದುವೀರ್ ಸಲಹೆ ನೀಡಿದರು. ಗುರುವಾರ ಕೆಆರ್ ಎಸ್ ಅಣೆಕಟ್ಟೆಗೆ ಭೇಟಿ ನೀಡುತ್ತೇನೆ ಎಂದರು. ಅವರ ನೂತನ ಕಚೇರಿಯನ್ನು ಬಿಜೆಪಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು.