ಬಳ್ಳಾರಿ:
ಆರ್‌ಟಿಒ ಕಚೇರಿಯ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆದಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿವೇಕಾನಂದ ನಗರದಲ್ಲಿರುವ ಆರ್‌ಟಿಒ ಕಚೇರಿಯ ಎಸ್‌ಡಿಸಿ ನಾಗೇಶ ಅವರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಬಳ್ಳಾರಿ ಇನ್‌ಸ್ಪೆಕ್ಟರ್ ಮಹಮ್ಮದ್ ರಫೀಕ್ ನೇತೃತ್ವದಲ್ಲಿ ದಾಳಿ ನಡೆದಿತ್ತು. 3 ಲಕ್ಷ ನಗದು ಸೇರಿ ಬೆಳ್ಳಿ-ಬಂಗಾರ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.