ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ …..!

ತುಮಕೂರು :

   ಬಿಜೆಪಿ ಅಧಿಕಾರವಧಿಯಲ್ಲಿ 545 ಪಿಎಸ್‌ಐ ಹಗರಣ ನಡೆದಿತ್ತು.  ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.

   ತುಮಕೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಗರಣದಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆ ಅಂತಿಮ ಘಟ್ಟ ಮುಟ್ಟಿದೆ.545 ಪೊಲೀಸ್‌ ಸಬ್‌ಇನ್‌ಸ್ಪೆಕ್ಟ‌ರ್ ನೇಮಕಾತಿ ಪ್ರಕ್ರಿಯೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ತಿಳಿಸಿದರು.

    ಇನ್ನೂ 403 ಸಬ್‌ಇನ್‌ಸ್ಪೆಕ್ಟರ್ ನೇಮಕಾತಿಗೆ ಪರೀಕ್ಷೆ ನಡೆದಿದ್ದು, ಫಲಿತಾಂಶ ಪ್ರಕಟವಾಗಬೇಕಿದೆ. ಮತ್ತೂ 600 ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಆರಂಭವಾಗಬೇಕಿದೆ. ಈ ಎಲ್ಲಾ ಹಂತದ ನೇಮಕಾತಿ ಪೂರ್ಣಗೊಳ್ಳುವ ಹೊತ್ತಿಗೆ 1,500 ಸಬ್‌ಇನ್‌ಸ್ಪೆಕ್ಟರ್‌ಗಳನ್ನು ನೇಮಕ ಮಾಡಿಕೊಂಡಂತಾಗಲಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ 20 ಸಾವಿರ ಪೊಲೀಸ್ ಕಾನ್ ಸ್ಟೆಬಲ್ ಗಳ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link