ತಿರುವನಂತಪುರಂ:
ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ಗುರುವಾರ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
135 ಪ್ರಯಾಣಿಕರಿದ್ದ ವಿಮಾನವನ್ನು ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಿ ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಬೆಳಗ್ಗೆ 8.44ರ ವೇಳೆಗೆ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಹೊರತರಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್ ಗೆ ಬೆಳಗ್ಗೆ 7.30 ಕ್ಕೆ ಬಾಂಬ್ ಬೆದರಿಕೆ ಬಗ್ಗೆ ತಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಬೆಳಗ್ಗೆ 7.36 ಕ್ಕೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.ಬೆದರಿಕೆಯ ಮೂಲದ ವಿವರಗಳು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.