ಲಂಡನ್
ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡದ ನಾಯಕ ಧನಂಜಯ ಡಿಸಿಲ್ವಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಢ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಡಾನ್ ಲಾರೆನ್ಸ್ (9) ಬೇಗನೆ ಔಟಾದರೆ, ಆ ಬಳಿಕ ಬಂದ ನಾಯಕ ಒಲೀ ಪೋಪ್ 1 ರನ್ಗಳಿಸಿ ಪೆವಿಲಿಯನ್ಗೆ ಮರಳಿದ್ದರು. ಇನ್ನು ಬೆನ್ ಡಕೆಟ್ ಬಿರುಸಿನ 40 ರನ್ಗಳನ್ನು ಬಾರಿಸಿ ವಿಕೆಟ್ ಒಪ್ಪಿಸಿದ್ದರು.
ಈ ಹಂತದಲ್ಲಿ ಕಣಕ್ಕಿಳಿದ ಜೋ ರೂಟ್ ಆಕರ್ಷಕ ಬ್ಯಾಟಿಂಗ್ನೊಂದಿಗೆ ಶತಕ ಸಿಡಿಸಿದರು. 206 ಎಸೆತಗಳನ್ನು ಎದುರಿಸಿದ ರೂಟ್ 18 ಫೋರ್ಗಳೊಂದಿಗೆ 143 ರನ್ ಬಾರಿಸಿದರು. ಇದರ ನಡುವೆ ಹ್ಯಾರಿಸ್ ಬ್ರೂಕ್ 33 ರನ್ ಬಾರಿಸಿದರೆ, ಜೇಮಿ ಸ್ಮಿತ್ 21 ರನ್ಗಳ ಕೊಡುಗೆ ನೀಡಿದರು.
ಇನ್ನು 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಸ್ ಅಟ್ಕಿನ್ಸನ್ ಚೊಚ್ಚಲ ಶತಕ ಪೂರೈಸುವ ಮೂಲಕ ಬ್ಯಾಟ್ ಮೇಲೆಕ್ಕೆತ್ತಿದರು. 115 ಎಸೆತಗಳನ್ನು ಎದುರಿಸಿದ ಅಟ್ಕಿನ್ಸನ್ 14 ಫೋರ್ ಹಾಗೂ 4 ಭರ್ಜರಿ ಸಿಕ್ಸರ್ಗಳೊಂದಿಗೆ 118 ರನ್ ಬಾರಿಸಿದರು. ಈ ಮೂಲಕ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 427 ರನ್ಗಳಿಸಿ ಆಲೌಟ್ ಆಯಿತು. ಶ್ರೀಲಂಕಾ ಪರ ಅಸಿತಾ ಫರ್ನಾಂಡೊ 102 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.
ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಶ್ರೀಲಂಕಾ ತಂಡಕ್ಕೆ ಇಂಗ್ಲೆಂಡ್ ವೇಗಿಗಳು ಆಘಾತ ನೀಡಿದ್ದರು. ಸಾಂಘಿಕ ದಾಳಿ ಸಂಘಟಿಸಿದ ಆಂಗ್ಲರು 87 ರನ್ಗಳಿಗೆ 6 ವಿಕೆಟ್ ಉರುಳಿಸಿದರು. ಇದಾಗ್ಯೂ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಮಿಂದು ಮೆಂಡಿಸ್ 120 ಎಸೆತಗಳಲ್ಲಿ 8 ಫೋರ್ ಹಾಗೂ 3 ಸಿಕ್ಸ್ನೊಂದಿಗೆ 74 ರನ್ ಬಾರಿಸಿದರು.ಆದರೆ ಅತ್ಯುತ್ತಮ ದಾಳಿಗೆ ನಲುಗಿದ ಶ್ರೀಲಂಕಾ ತಂಡವು ಅಂತಿಮವಾಗಿ 196 ರನ್ಗಳಿಗೆ ಸರ್ವಪತನ ಕಂಡಿತು. ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಒಲೀ ಸ್ಟೋನ್, ಮ್ಯಾಥ್ಯೂ ಪೋಟ್ಸ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.