ಬೆಂಗಳೂರು
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿ ಇದೀಗ ಸೆಪ್ಟೆಂಬರ್ 2ರಂದು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ವಾದ ವಾದಮಂಡಿಸಿದ್ದಾರೆ. ದೂರುದಾರರ ಪರ ವಾದವನ್ನು ಆಲಿಸಿದ ಹೈಕೋರ್ಟ್ ಬಳಿಕ ವಿಚಾರಣೆಯನ್ನು ಸೋಮವಾರ (ಸೆಪ್ಟೆಂಬರ್ 2) ದಂದು ಮುಂದೂಡಿದೆ. ಇನ್ನು ಈ ವೇಳೆ ಹಿರಿಯ ವಕೀಲ ಕೆ.ಜಿ.ರಾಘವನ್ರಿಂದ ವಾದಮಂಡನೆಗೆ ಅವಕಾಶ ಕೋರಲಾಗಿದೆ.