HSRP ಅಳವಡಿಕೆ ದಿನಾಂಕ ಮುಂದಕ್ಕೆ ಹಾಕಿದ ಹೈಕೋರ್ಟ್….!

ಬೆಂಗಳೂರು

    ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್  ಅನ್ನು ಇನ್ನೂ ಅಳವಡಿಸದವರಿಗೆ ಹೈಕೋರ್ಟ್​​ನಿಂದ ರಿಲೀಫ್ ದೊರೆತಿದೆ. ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆಯಾಗಿದೆ. ಗಡುವು ವಿಸ್ತರಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದೂಡಿದೆ. ಜತೆಗೆ, ಗಡುವು ಕೂಡ ವಿಸ್ತರಣೆಯಾಗಿದೆ.

   ನ್ಯಾಯಮೂರ್ತಿಗಳಾದ ಕೆ ಕಾಮೇಶ್ವರ ರಾವ್ ಮತ್ತು ಕೆ ರಾಜೇಶ್‌ ರೈ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ನವೆಂಬರ್ 20ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆ ಮಾಡಿದೆ. ಜತೆಗೆ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವನ್ನೂ ವಿಸ್ತರಣೆ ಮಾಡಿ ಆದೇಶ ಪ್ರಕಟಿಸಿದೆ.

   ಈ ಹಿಂದೆ ಸಾರಿಗೆ ಹೊರಡಿಸಿದ್ದ ಸುತ್ತೋಲೆ ಪ್ರಕಾರ, ಸೆಪ್ಟೆಂಬರ್ 15ಕ್ಕೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಕೊನೆಯ ದಿನವಾಗಿತ್ತು.

Recent Articles

spot_img

Related Stories

Share via
Copy link
Powered by Social Snap