ನಮ್ಮ ತಂದೆ ಮೇಲೆ ಮಾಡುತ್ತಿರುವ ಆರೋಪಗಳೆಲ್ಲಾ ಬೋಗಸ್‌ : ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: 

   ನಮ್ಮ ತಂದೆ ಮೇಲೆ ಮಾಡುತ್ತಿರುವ ಆರೋಪಗಳೆಲ್ಲಾ ಬೋಗಸ್‌ ಅವರು ಸುಮ್ಮನೆ ಆರೋಪ ಮಾಡುತ್ತಿರುವ ಎಲ್ಲರಿಗೂ ಉತ್ತರ ಕೊಟ್ಟು, ರಾಜೀನಾಮೆ ಕೊಡಲು ಸಾ‍ಧ್ಯವಿಲ್ಲ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

   ಮೈಸೂರಿನ ಅರಮನೆಯ ಬಳಿ ಮಾ‍ಧ್ಯಮಗಳ ಜತೆ ಮಾತನಾಡಿದ ಅವರು, ವರುಣ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾದಿಂದ ಕೈಗೆತ್ತಿಕೊಳ್ಳಲಾದ ₹387 ಕೋಟಿ ವೆಚ್ಚದ ಕಾಮಗಾರಿಗಳ ವಿವರ ನೀಡುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿದರು.‘ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಹಣ ಬಳಕೆಯಾಗಿದೆ. ಅದರಲ್ಲಿ ತಪ್ಪೇನಿದೆ ಹೇಳಿ?’ ಎಂದು ಕೇಳಿದರು. ಇತ್ತೀಚಿಗೆ ನಮ್ಮ ತಂದೆ ಮೇಲೆ ಮಾಡುತ್ತಿರುವ ಎಲ್ಲಾ ಆರೋಪಗಳು ಬೋಗಸ್‌ ಎಂದರು.

   ಇಡೀ ವಿಶ್ವದಲ್ಲೇ, ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಗ್ಯಾರಂಟಿ ಯೋಜನೆಗಳನ್ನು ಸಹಿಸಿಕೊಳ್ಳಲಾಗದೆ ವಿನಾಕಾರಣ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಕೇಳುತ್ತಲೇ ಇರುತ್ತಾರೆ. ಅವರೇಕೆ ರಾಜೀನಾಮೆ ಕೊಡಬೇಕು? ಆರೋಪಗಳಿಗೆಲ್ಲಾ ರಾಜೀನಾಮೆ ಕೊಡುತ್ತಾ ಹೋದರೆ ಅದರಲ್ಲಿ ಅರ್ಥ ಇದೆಯಾ?’ ಎಂದರು. ಸರ್ಕಾರದ ಮೇಲೆ ಆರೋಪ ಮಾಡಲು ಹಾಗೂ ಮಾತನಾಡಲು ಯಾವ ವಿಷಯಗಳೂ ಸಿಗುತ್ತಿಲ್ಲ.

Recent Articles

spot_img

Related Stories

Share via
Copy link