ಅತ್ಯಾಚಾರ ಆರೋಪ : ಕೇರಳ ಶಾಸಕ ಹಾಗೂ ನಟ ಮುಖೇಶ್ ಬಂಧನ

ಕೊಚ್ಚಿ: 

    ಮಹಿಳಾ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಡಳಿತಾರೂಢ ಸಿಪಿಐ(ಎಂ) ಶಾಸಕ ಹಾಗೂ ನಟ ಎಂ ಮುಖೇಶ್ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಮಂಗಳವಾರ ಔಪಚಾರಿಕವಾಗಿ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

   ಶಾಸಕರನ್ನು ಬಂಧಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ಮತ್ತು ಪುರುಷತ್ವ ಪರೀಕ್ಷೆಯನ್ನು ನಡೆಸಲಾಯಿತು. ಈ ತಿಂಗಳ ಆರಂಭದಲ್ಲಿ ಅವರು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಅವರ ವಕೀಲರು ಖಚಿತಪಡಿಸಿದ್ದಾರೆ.

   ನಟನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವರನ್ನು ವಿಚಾರಣೆಗೆ ಕರೆದ ನಂತರ ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಬೆಳಗ್ಗೆ 9.45ಕ್ಕೆ ಇಲ್ಲಿನ ಕರಾವಳಿ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿರುವ ಎಸ್‌ಐಟಿ ಎದುರು ಮುಕೇಶ್‌ ಅವರು ವಿಚಾರಣೆಗೆ ಹಾಜರಾಗಿದ್ದು, ಮೂರೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

  ಮುಖೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ವಡಕ್ಕಂಚೇರಿ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಂದು ಮರಡು ಪೊಲೀಸರು ನಟನ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Recent Articles

spot_img

Related Stories

Share via
Copy link