ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ನವದೆಹಲಿ:

   ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.

  ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಇತರ ಮುಖಂಡರು ಪುಷ್ಪ ನಮನ ಸಲ್ಲಿಸಿದರು.

  ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಮೋದಿಯವರು, ಪೂಜ್ಯ ಬಾಪು ಅವರ ಜನ್ಮದಿನದಂದು ಎಲ್ಲಾ ದೇಶವಾಸಿಗಳ ಪರವಾಗಿ ನಮನಗಳನ್ನು ಸಲ್ಲಿಸುತ್ತಿದ್ದೇನೆ. ಸತ್ಯ, ಸಾಮರಸ್ಯ ಮತ್ತು ಸಮಾನತೆಯ ಆಧಾರದ ಮೇಲೆ ಅವರ ಜೀವನ ಮತ್ತು ಆದರ್ಶಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತವೆ ಎಂದು ಹೇಳಿದ್ದರು. ಮತ್ತೊಂದು ಪೋಸ್ಟ್ ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ನೆನೆದು, ದೇಶದ ಸೈನಿಕರು, ರೈತರು ಮತ್ತು ಸ್ವಾಭಿಮಾನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು ಎಂದು ತಿಳಿಸಿದ್ದರು.

  ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನಕರ್​, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಲೆಫ್ಟಿನೆಂಟ್​ ಗವರ್​ನರ್​ ವಿ.ಕೆ. ಸಕ್ಸೇನಾ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿ ಸಿಎಂ ಆತಿಶಿಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿರುವ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು.

Recent Articles

spot_img

Related Stories

Share via
Copy link