ಎಷ್ಟೇ ಸಂಧಾನ ಮಾಡಿದರೂ ಕರಗದ “ಸೈನಿಕನ” ಸರ್ಧೆಯ ಛಲ….!

ಬೆಂಗಳೂರು: 

    ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಪ್ರಬಲ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರನು ಮನವೊಲಿಸುವ ಪ್ರಯತ್ನವನ್ನು ಜೆಡಿಎಸ್‌ ನಾಯಕರು ನಡೆಸಿದರೂ ಫಲ ನೀಡಿದಂತಿಲ್ಲ.

   ಕುಮಾರಸ್ವಾಮಿಗೆ ಸಿಪಿ ಯೋಗೇಶ್ವರ್ ಅವರ ಮನವೊಲಿಕೆ ಮಾಡುವುದೇ ದೊಡ್ಡ ಸವಾಲಾಗಿದೆ. ಈ ಸಂಬಂಧ ಹೇಗಾದರೂ ಮಾಡಿ ಯೋಗೇಶ್ವರ್​ ಅವರನ್ನು ಮನವೊಲಿಸಿ ಎಂದು ಸಾರಾ ಮಹೇಶ್, ಸಿಎಸ್ ಪುಟ್ಟರಾಜು ಸೇರಿದಂತೆ ಪ್ರಮುಖ ನಾಯಕರಿಗೆ ಕುಮಾರಸ್ವಾಮಿ ಅವರು ಟಾಸ್ಕ್ ಕೊಟ್ಟಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಬೇಡ, ಹೈಕಮಾಂಡ್ ಮಧ್ಯೆಸ್ಥಿಕೆಯೂ ಬೇಡ ಎನ್ನುವಂತೆ ಜೆಡಿಎಸ್​ ನಾಯಕರು ನೇರವಾಗಿ ಮಾಜಿ ಸೈನಿಕನ ಬೆನ್ನಿಗೆ ಬಿದ್ದಿದ್ದಾರೆ.

   ಸಾರಾ ಮಹೇಶ್, ಪುಟ್ಟರಾಜು ಸೇರಿದಂತೆ ಜೆಡಿಎಸ್​​ನ ಪ್ರಮುಖ ನಾಯಕರು ಬೆಂಗಳೂರಿನಲ್ಲಿಂದು ಖಾಸಗಿ ಹೋಟೆಲಿನಲ್ಲಿ ಯೋಗೇಶ್ವರ್​ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಯೋಗೇಶ್ವರ್, ‘ನಾನು ಸ್ಪರ್ಧಿಸುವೆ. ನನಗೇ ನೀವು ಬೆಂಬಲ ನೀಡಿ’ ಎಂದು ತಮ್ಮನ್ನು ಮನವೊಲಿಸಲು ಯತ್ನಿಸಿದ ಜೆಡಿಎಸ್‌ ನಾಯಕರ ಬಳಿ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

    ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್, ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಅಲ್ಲಿ ಬೇರೆ ಯಾರೇ ಕಣಕ್ಕಿಳಿದರೂ ಎನ್‌ಡಿಎಗೆ ಕಷ್ಟವಾಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಎಲ್ಲರಿಗೂ ಜವಾಬ್ದಾರಿ ಇದೆ. ಅವಕಾಶ ಮಾಡಿಕೊಡಿ ಎಂದು ಕೇಳಿದ್ದೇನೆ, ಶನಿವಾರದ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು. ಚುನಾವಣೆಗೆ ಟಿಕೆಟ್ ಕೇಳುತ್ತಿದ್ದು, ಕೇಳುತ್ತಲೇ ಇರುತ್ತೇನೆ. ಪಕ್ಷದ ಕಾರ್ಯಕರ್ತರ ಭಾವನೆಗೆ ತಕ್ಕಂತೆ ಮಾತನಾಡುತ್ತಿದ್ದು, ಅದಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link
Powered by Social Snap