ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು:

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.ಇಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತು.

   ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿರುವ ದರ್ಶನ್ ಅವರನ್ನು ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ಸಂಬಂಧ ಜೈಲು ಅಧಿಕಾರಿಗಳಿಂದ ದರ್ಶನ್ ಅವರ ವೈದ್ಯಕೀಯ ವರದಿ ಕೇಳಿದ ನ್ಯಾಯಾಲಯ, ಆಕ್ಷೇಪ ಸಲ್ಲಿಕೆಗೆ ಎಸ್. ಪಿ. ಪಿ. ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು.

Recent Articles

spot_img

Related Stories

Share via
Copy link