ನವದೆಹಲಿ:
ಕಳೆದ ವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ರಾಷ್ಟ್ರ ರಾಜಧಾನಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾದರು.
“ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ” ಎಂದು ಕೇಂದ್ರ ಗೃಹ ಸಚಿವರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಕೇಂದ್ರ ಗೃಹ ಸಚಿವರ ಭೇಟಿ ವೇಳೆ ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ ನಂತರ ಈ ಭೇಟಿ ನಡೆದಿದೆ. ಗಂದೇರ್ಬಾಲ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ವೈದ್ಯರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಏಳು ಜನರ ಸಾವಿಗೆ ಕಾರಣವಾದ ನಂತರ ಭದ್ರತಾ ಪಡೆಗಳು ಮತ್ತು ಪೊಲೀಸರು ಎಚ್ಚರವಾಗಿರಬೇಕಾದ ಅಗತ್ಯವನ್ನು ಈ ಹಿಂದೆ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದರು. “ಈಗ ಆಡಳಿತ, ವಿಶೇಷವಾಗಿ ಪೊಲೀಸ್ ಮತ್ತು ಭದ್ರತಾ ಪಡೆಗಳು ಮತ್ತಷ್ಟು ಎಚ್ಚರಿಕೆ ವಹಿಸಬೇಕು ಮತ್ತು ಅಂತಹ ದಾಳಿಗಳು ನಡೆಯದಂತೆ ನೋಡಿಕೊಳ್ಳಬೇಕು” ಎಂದು ಜಮ್ಮು ಮತ್ತು ಕಾಶ್ಮೀರ ಸಿಎಂ ಹೇಳಿದರು.
ಅಕ್ಟೋಬರ್ 20 ರಂದು, ಗಂದೇರ್ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದಾಗ ವೈದ್ಯರು ಮತ್ತು ಆರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದರು.