ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ 7 ಶೂಟರ್‌ಗಳ ಬಂಧನ….!

ನವದೆಹಲಿ: 

   ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ವಿರುದ್ಧದ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕ ಏಳು ಶಂಕಿತ ಶೂಟರ್‌ಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.ರಾಜಸ್ಥಾನದಲ್ಲಿ ಯಾರನ್ನೊ ಗುರಿಯಾಗಿಸಿ, ಯೋಜನೆ ರೂಪಿಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

   ಅಕ್ಟೋಬರ್ 12 ರಂದು ಮುಂಬೈನಲ್ಲಿ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕೆಲವು ದಿನಗಳ ನಂತರ ಈ ಬಂಧನ ನಡೆದಿದೆ. ಬಿಷ್ಣೋಯಿ ಗ್ಯಾಂಗ್ ಕೊಲೆಯ ಹೊಣೆಯನ್ನು ಹೊತ್ತುಕೊಂಡಿದೆ. ಏಳು ಮಂದಿಯನ್ನು ಪಂಜಾಬ್ ಮತ್ತು ಇತರ ರಾಜ್ಯಗಳಿಂದ ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

   ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಅವರ ಆಪ್ತರಾಗಿರುವ ಅರ್ಜೂ ಬಿಷ್ಣೋಯಿ ಅವರ ನಿರ್ದೇಶನದ ಮೇರೆಗೆ, ಬಂಧಿತರು ರಾಜಸ್ಥಾನದಲ್ಲಿ ಯಾರನ್ನೂ ಗುರಿಯಾಗಿಸಲು ಯೋಜಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಬಾಬಾ ಸಿದ್ದಿಕ್ ಮೇಲಿನ ದಾಳಿಯಲ್ಲಿ ಅವರಿಗೆ ಸಂಬಂಧವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

Recent Articles

spot_img

Related Stories

Share via
Copy link