ಬೆಂಗಳೂರು
ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭಾರೀ ಬೇಡಿಕೆ ಇದೆ. ದೇಶದಲ್ಲಿ 55ಕ್ಕೂ ಅಧಿಕ ಮಾರ್ಗದಲ್ಲಿ ಈ ಮಾದರಿಯ ಬಿಳಿ ಮತ್ತು ಕೇಸರಿ ಬಣ್ಣದ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಎರಡು ನಗರಗಳ ನಡುವಿನ ಪ್ರಯಾಣದ ಅವಧಿ ಇಳಿಕೆ ಮಾಡುವಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಈಗ ರೈಲ್ವೆ ಇಲಾಖೆ 4 ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಆರಂಭಿಸಲು ತಯಾರಿ ನಡೆಸುತ್ತಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗೂ ಮೊದಲು ಭಾರತೀಯ ರೈಲ್ವೆ 6 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಆರಂಭಿಸಿತ್ತು. ಇದರಲ್ಲಿ ಕರ್ನಾಟಕಕ್ಕೆ ಹುಬ್ಬಳ್ಳಿ-ಪುಣೆ ನಡುವಿನ ರೈಲು ಸಿಕ್ಕಿತ್ತು. ಈಗ 4 ಹೊಸ ರೈಲು ಸೇವೆ ಆರಂಭವಾಗಲಿದ್ದು, ಕರ್ನಾಟಕಕ್ಕೂ ಒಂದು ರೈಲು ಸಿಗಲಿದೆ ಎಂದು ಅಂದಾಜಿಸಲಾಗಿದೆ
ಭಾರತೀಯ ರೈಲ್ವೆ ನವೆಂಬರ್ 20ರ ಬಳಿಕ 4 ಹೊಸ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರವನ್ನು ಆರಂಭಿಸಲಿದೆ. ಇದಕ್ಕಾಗಿ ಅಗತ್ಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. 4 ಮಾರ್ಗದ ರೈಲುಗಳು ಮಹಾರಾಷ್ಟ್ರ ರಾಜ್ಯಕ್ಕೆ ಸಿಗಲಿವೆ ಎಂಬ ಮಾಹಿತಿ ಇದೆ. ಮಹಾರಾಷ್ಟ್ರದಿಂದ ದೇಶದ ವಿವಿಧ ನಗರಗಳಿಗೆ ರೈಲುಗಳು ಸಂಚಾರವನ್ನು ನಡೆಸಲಿವೆ