ಸರ್ಕಾರಿ ಅಧಿಕಾರಿಗಳಿಗೆ ಕೆಂಪು-ಹಳದಿ ಬಣ್ಣದ ಟ್ಯಾಗ್​ ಕಡ್ಡಾಯ….!

ಬೆಂಗಳೂರು

    ಪ್ರತಿ ವರ್ಷ ನವೆಂಬರ್​ 1 ರಂದು ಕನ್ನಡ ರಾಜ್ಯೋತ್ಯವ  ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ   ನಿರ್ಧರಿಸಿದಂತೆ. ನಾಡಿನಾದ್ಯಂತ ಕನ್ನಡ ಕಲರವ ಮನೆ-ಮನವನ್ನು ಮುಟ್ಟಿಸಲು ಮುಂದಾಗಿದೆ. ಇದರ ಭಾಗವೆಂಬಂತೆ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮವನ್ನು ಸರ್ಕಾರ ಜಾರಿಗೆ ತಂದಿದೆ. ಸರ್ಕಾರಿ ಅಧಿಕಾರಿಗಳು ಧರಿಸುವ ಗುರುತಿನ ಚೀಟಿ ಟ್ಯಾಗ್​ ನಾಡಧ್ವಜ ಬಣ್ಣದಲ್ಲೇ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

   ಸರ್ಕಾರಿ ಅಧಿಕಾರಿಗಳು ಕನ್ನಡ ರಾಜ್ಯೋತ್ಸವದೊಳಗೆ ಕಡ್ಡಾಯವಾಗಿ ಗುರುತಿನ ಚೀಟಿಗೆ ಕೆಂಪು-ಹಳದಿ ಬಣ್ಣದ ಟ್ಯಾಗ್​​ ಅನ್ನೇ​ ಧರಿಸಬೇಕು ಎಂದು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಡಿಪಿಎಆರ್ ಸೂಚನೆ ನೀಡಿದೆ. ನವೆಂಬರ್ 1​ರಂದು ಎಲ್ಲ ಶಾಲೆ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳ ಕಟ್ಟಡ ಮೇಲೆ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದರು. 

   ಬೆಂಗಳೂರು ಜಿಲ್ಲೆಯಲ್ಲಿ ಶೇ50 ರಷ್ಟು ಜನ ಹೊರಗಿನಿಂದ ಬಂದಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರ ಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದು ಹೇಳಿದ್ದರು.

   ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ ನಿರ್ಧಾರ ಮಾಡುತ್ತೆ. ಕನ್ನಡ ಸಂಘಟನೆಗಳು ಖಾಸಗಿ ಸಂಸ್ಥೆಗಳ ಬಳಿ ಹೋಗಿ ಗಲಾಟೆ, ಬೆದರಿಸುವುದು ಬೇಡ ಎಂದು ಎಚ್ಚರಿಕೆ ನೀಡಿದ್ದರು.

Recent Articles

spot_img

Related Stories

Share via
Copy link