ಧರ್ಮಸ್ಥಳಕ್ಕೆ ಮತ್ತೊಂದು ಹೆಮ್ಮೆಯ ಗರಿ …!

ಮಂಗಳೂರು: 

   ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ.

   ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ ೭೬ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು.

   ಒಬ್ಬನೆ ವ್ಯಕ್ತಿ ಕಳೆದ ೫೦ ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಟ ಸೇವೆಯಾಗಿದೆ ಎಂದು ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ.೭,೫೦೦ ತಾಳೆಗರಿ ಹಸ್ತಪ್ರತಿಗಳು, ೨೧,೦೦೦ ಕಲಾತ್ಮಕ ವಸ್ತುಗಳು, ೨೫,೦೦೦ ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಮಿಕ್ಕಿ ವಿಂಟೇಜ್ ಕಾರುಗಳ ಸಂಗ್ರಹದ ಬಗ್ಯೆ ಹೆಗ್ಗಡೆಯವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

Recent Articles

spot_img

Related Stories

Share via
Copy link