ಹಾಲಿನ ದರ ಏರಿಕೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ : ಭೀಮಾ ನಾಯಕ್

ಬೆಂಗಳೂರು

     ಕೆಲ ದಿನಗಳ ಹಿಂದೆ ರಾಮನಗರದಲ್ಲಿ ವೇದಿಕೆ ಮೇಲೆ ಮುಖ್ಯಮಂತ್ರತಿಗಳು ಎಲ್ಲ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದಿದ್ದರು. ಆದರೆ, ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೆಎಂಎಫ್​  ಅಧ್ಯಕ್ಷ ಭೀಮಾ ನಾಯ್ಕ್ ​ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಮಾಹಿತಿ ಇಲ್ಲ. ಆದರೆ ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರ ಬೇಡಿಕೆ ಇದೆ. ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕರ ವರ್ಗಾವಣೆ ಆಡಳಿತಾತ್ಮಕ ತೀರ್ಮಾನ ಅಷ್ಟೇ ಎಂದು ತಿಳಿಸಿದರು.

    ನವೆಂಬರ್ 21ರಂದು ದೆಹಲಿಯಲ್ಲಿ ನಂದಿನಿ ಉತ್ಪನ್ನಗಳಿಗೆ ಚಾಲನೆ ನೀಡಲಾಗಿತ್ತು. ನಿತ್ಯ 5 ರಿಂದ 6 ಸಾವಿರ ಲೀಟರ್​​ ನಂದಿನಿ ಹಾಲು ಮಾರಾಟವಾಗುತ್ತಿದೆ. ದೆಹಲಿಯಲ್ಲಿ ನಂದಿನಿ ಹಾಲು ಮಾರಾಟ ಮಾಡುವುದು ನಮ್ಮ ಕನಸು ಇತ್ತು. ಮುಂದಿನ ತಿಂಗಳ ವೇಳೆಗೆ 1 ಲಕ್ಷ ಲೀಟರ್ ಹಾಲು ಮಾರಾಟ ಮಾಡುವ ನಿರೀಕ್ಷೆ ಇದೆ ಎಂದರು. 

   ಬೇರೆ ಬ್ರ್ಯಾಂಡ್​ ಉತ್ಪನ್ನಗಳ ಬಗ್ಗೆ ಮಾತನಾಡುವುದಿಲ್ಲ. ನಮಗೆ ಗ್ರಾಹಕರ ಬೇಡಿಕೆ ಇದೆ, ಅದಕ್ಕೆ ತಕ್ಕಂತೆ ಪೂರೈಕೆ ಮಾಡುತ್ತೇವೆ. ಬ್ಯುಸಿನೆಸ್​ನಲ್ಲಿ ಸ್ಪರ್ಧೆ ಇದ್ದಿದ್ದೇ, ಅವೆಲ್ಲವನ್ನೂ ಎದುರಿಸಿ ಯಶಸ್ವಿ ಆಗುತ್ತೇವೆ. ಡಿಸೆಂಬರ್​ 9ರಂದು ನಾನು (ಭೀಮಾ ನಾಯ್ಕ್​), ಕೆಎಂಎಫ್​ ವ್ಯವಸ್ಥಾಪಕ ನಿರ್ದೇಶಕರು ದೆಹಲಿಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಅಮುಲ್ ಮತ್ತು ನಂದಿನಿ ವಿಲೀನ ಆಗಲಿದೆ ಎಂಬ ವದಂತಿ ವಿಚಾರವಾಗಿ ಮಾತನಾಡಿದ ಅವರು, ಆ ರೀತಿಯ ವಿಲೀನ ಮಾಡಲು ಸಾಧ್ಯವೇ ಇಲ್ಲ. ಈ ಹಿಂದೆ ಕೇಂದ್ರ ಸಚಿವ ಅಮಿತ್ ಶಾ ಅವರು ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ಯಾವುದೋ ಒಂದು ಮಾತಿನ ಹಿನ್ನಲೆಯಲ್ಲಿ ವದಂತಿ ಸೃಷ್ಟಿ ಆಗಿತ್ತು. ಇದೆಲ್ಲವೂ ಒಂದು ವದಂತಿ ಅಷ್ಟೇ. ಆ ರೀತಿಯ ವಿಲೀನ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದರು. 

   ಕೆಲವು ತಿಂಗಳ ಹಿಂದೆ ಅಮೆರಿಕ ಹಾಗೂ ವೆಸ್ಟ್ ಇಂಡೀಸ್​​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವವನ್ನು ಕೆಎಂಎಫ್​ ವಹಿಸಿತ್ತು. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ‘ನಂದಿನಿ’ ಬ್ರ್ಯಾಂಡ್ ಹೆಸರು ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ, ವಿಶ್ವಕಪ್ ವೇಳೆ ನಂದಿನಿ ಉತ್ಪನ್ನಗಳನ್ನೂ ಪೂರೈಸಲಾಗಿತ್ತು. ಆ ಮೂಲಕ ವಿಶ್ವಮಟ್ಟದಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಗಮನ ಸೆಳೆದಿದ್ದವು.

   ವಿಶ್ವಕಪ್ ವೇಳೆ ನಂದಿನಿ ಬ್ರ್ಯಾಂಡ್​ನ ಫ್ರೋಝನ್ ಸಿಹಿತಿಂಡಿಗಳು, ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್​ ಅನ್ನು ಕೆಎಂಎಫ್​​ ಅಮೆರಿಕಕ್ಕೆ ಪೂರೈಕೆ ಮಾಡಿತ್ತು.

Recent Articles

spot_img

Related Stories

Share via
Copy link