ಬೆಂಗಳೂರು :
ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ, ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು, ಇದೀಗ ಮತ್ತೊಂದು ಚಂಡಮಾರುತದ ಆಗಮನವಾಗುತ್ತಿದ್ದು, ಡಿಸೆಂಬರ್ 13ರಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಡಗಲಿ, ಪುತ್ತೂರು, ಅಣ್ಣಿಗೆರೆ, ಹರಪನಹಳ್ಳಿ, ಉಪ್ಪಿನಂಗಡಿ, ಬೈಲಹೊಂಗಲ, ಮುಲ್ಕಿ, ಪಣಂಬೂರು, ಹುಣಸಗಿ, ಗದಗ, ಮುದಗಲ್, ಬಾದಾಮಿ, ಗದಗ, ಮುನಿರಾಬಾದ್, ದಾವಣಗೆರೆ, ಬಾಳೆಹೊನ್ನೂರು, ಜಯಪುರ, ಶೃಂಗೇರಿಯಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.