ಪಂಚಮಸಾಲಿ ಹೋರಾಟದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಳಗಾವಿ 

     ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಪಂಚಮಸಾಲಿ ಪೀಠಾದಿಪತಿ ಜಯಮೃತ್ಯಂಜಯಸ್ವಾಮಿ ಮತ್ತಿತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

     ವಿಧಾನ ಪರಿಷತ್‌ನಲ್ಲಿ ಶೂನ್ಯ ಅವಧಿಯಲ್ಲಿ ಅವರು ಮಾತನಾಡಿ, ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲಾ ರೀತಿಯ ಅವಕಾಶಗಳನ್ನು ನೀಡಲಾಗಿತ್ತು. ಆದರೆ ಪ್ರತಿಭಟನಾಕಾರರು ಕಾನೂನು ಮತ್ತು ಸುವ್ಯವಸ್ಥಗೆ ಭಂಗ ತರುವ ರೀತಿಯಲ್ಲಿ ಆದೇಶಗಳನ್ನು ಉಲ್ಲಂಘಿಸಿ ಸುವರ್ಣ ವಿಧನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರಣ ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಮುಂಜಾಗ್ರತಾ ಬಂಧನ ಮಾತ್ರ ನಡೆಸಲಾಗಿತ್ತು ಎಂದರು.

Recent Articles

spot_img

Related Stories

Share via
Copy link