ಬೆಂಗಳೂರು : ಟೆಕ್ಕಿ ಆತ್ಮಹತ್ಯೆ: ಜಾಮೀನು ಅರ್ಜಿ ಸಲ್ಲಿಸಿದ ಪತ್ನಿ ಮತ್ತು ಸಂಬಂಧಿಕರು

ಅಲಹಾಬಾದ್:

    ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಅವರ ಪತ್ನಿ ಮತ್ತು ಅವರ ಕುಟುಂಬ ಸದಸ್ಯರು ಶನಿವಾರ ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

   ಬೆಂಗಳೂರು ನಗರ ಪೊಲೀಸರು ಶುಕ್ರವಾರ ನಿಕಿತಾ ಸಿಂಘಾನಿಯಾ ಅವರ ಮನೆಗೆ ತೆರೆಳಿ ನೋಟಿಸ್ ನೀಡಿದ್ದು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ನಂತರ ಆರೋಪಿಗಳು ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. 

   34 ವರ್ಷದ ಇಂಜಿನಿಯರ್ ಸುಭಾಷ್ ಬೆಂಗಳೂರಿನಲ್ಲಿ ಕಳೆದ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಹೀಗಾಗಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಸಂಬಂಧಿಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಲಾಗಿದೆ.

Recent Articles

spot_img

Related Stories

Share via
Copy link