ಮಾಯೋಟ್​ : ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು

ನವದೆಹಲಿ :

   ಚಿಡೋ ಚಂಡಮಾರುತವು ಫ್ರಾನ್ಸ್​ ದೊಡ್ಡ ಅನಾಹುತವನ್ನೇ ಸೃಷ್ಟಿ ಮಾಡಿದೆ, ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಆಫ್ರಿಕಾದ ಕರಾವಳಿಯ ಆಗ್ನೇಯ ಹಿಂದೂ ಮಹಾಸಾಗರದಲ್ಲಿರುವ ಮಾಯೋಟ್ ಫ್ರಾನ್ಸ್ ಮತ್ತು ಯುರೋಪಿಯನ್ ಒಕ್ಕೂಟದ ಬಡ ಪ್ರದೇಶವಾಗಿದೆ. ಅಧಿಕಾರಿಯ ಪ್ರಕಾರ, ಇದು 90 ವರ್ಷಗಳಲ್ಲಿ ಮಾಯೋಟ್​ಗೆ ಅಪ್ಪಳಿಸಿರುವ ಅತ್ಯಂತ ಕೆಟ್ಟ ಚಂಡಮಾರುತವಾಗಿದೆ.

   ಚಿಡೋ ಚಂಡಮಾರುತ ಇದೀಗ ಆಫ್ರಿಕಾದ ಪೂರ್ವ ಕರಾವಳಿಯನ್ನು ತಲುಪಿದೆ.ಕೊಳೆಗೇರಿಗಳಲ್ಲಿ ವಾಸಿಸುವ ಅನೇಕ ಜನರು ಗಂಭೀರ ಅಪಾಯಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು. ಚಿಡೋ ಗಂಟೆಗೆ 220 ಕಿಲೋಮೀಟರ್‌ಗಿಂತಲೂ ಹೆಚ್ಚು ಗಾಳಿಯ ರಭಸವನ್ನು ಉಂಟು ಮಾಡಿತ್ತು. ಇದರಿಂದ ಹಲವಾರು ಮನೆಗಳು ಹಾನಿಗೊಳಗಾಗಿವೆ. ಮಾಯೋಟ್​ನಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ವಾಸವಿದ್ದಾರೆ.

   ಇದು ಆಫ್ರಿಕಾದ ಪೂರ್ವ ಕರಾವಳಿಯಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿರುವ ಎರಡು ಪ್ರಮುಖ ದ್ವೀಪಗಳಲ್ಲಿ ಹರಡಿದೆ. ಕೆಲವೆಡೆ ಇಡೀ ಪ್ರದೇಶವೇ ನಾಶವಾಗಿದೆ. ಹಲವು ಮರಗಳು ಧರೆಗುರುಳಿದ್ದು, ದೋಣಿಗಳು ಉರುಳಿ ಬಿದ್ದಿವೆ ಅಥವಾ ಮುಳುಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.

Recent Articles

spot_img

Related Stories

Share via
Copy link