ಬೆಂಗಳೂರು:
ಬೆಂಗಳೂರು ಪೊಲೀಸರ ದಿಟ್ಟ ಕಾರ್ಯಾಚರಣೆ ನಡೆದ ಹಲವು ಬಾಂಗ್ಲಾದೇಶಿಗರು, ರೋಹಿಂಗ್ಯ ಮುಸ್ಲಿಂರನ್ನು ಪತ್ತೆ ಹಚ್ಚುತ್ತಿದ್ದಾರೆ. ಅಲ್ಲದೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಹ ನಾವು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಆದರೆ ಅಂದುಕೊಳ್ಳುವುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂಬುದಕ್ಕೆ ಇಲ್ಲೊಂದು ವಿಡಿಯೋ ಪ್ರತ್ಯಕ್ಷ ಸಾಕ್ಷಿಯಾಗಿ ಸಿಕ್ಕಿದೆ. ಹೌದು… ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಚಿಂದಿ ಆಯುತ್ತಿದ್ದ ಯುವಕನೋರ್ವನನ್ನು ಮಾತನಾಡಿಸುತ್ತಾರೆ. ನೀವು ಯಾರು ಎಂದು ಕೇಳಿದ್ದಕ್ಕೆ ಆ ಯುವಕ, ನಾನು ಬಾಂಗ್ಲಾದೇಶದವನು. ನಾನು ಇಲ್ಲಿ ಬೇಗೂರಿನಲ್ಲಿ ನೆಲೆಸಿದ್ದೇನೆ. ನನ್ನಂತೆ 3 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಮಂದಿ ಇಲ್ಲಿ ನೆಲೆಸಿದ್ದಾರೆ ಎಂದು ಹೇಳಿದ್ದಾನೆ.
ಮತದಾರರ ಚೀಟಿಯೂ ಇದೆ. ನಾವು ಪ್ರತಿ ಬಾರಿಯೂ ಕಾಂಗ್ರೆಸ್ ಗೆ ಮತ ನೀಡುತ್ತೇವೆ ಎಂದು ಹೇಳುತ್ತಾನೆ. ನಮಗೆ ಸಲೀಂ ಎಂಬುವರು ಆಶ್ರಯ ನೀಡಿದ್ದಾರೆ ಎಂದು ಯುವಕ ಹೇಳಿದ್ದಾನೆ. ಆರ್ಗನೈಸರ್ ವೀಕ್ಲಿ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಅಪ್ಲೋಡ್ ಆಗಿದ್ದು ಇದೀಗ ಭಾರಿ ವೈರಲ್ ಆಗುತ್ತಿದೆ.
