ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಹೆದ್ದಾರಿ ಮಾರ್ಗ ಬದಲಾವಣೆ

ಮಂಡ್ಯ

  ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 5 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆಯವರೆಗೆ ಮಾರ್ಗ ಬದಲಾವಣೆಯಾಗಲಿದೆ.

   ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಈ ನುಡಿಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ.

   ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಲಾಗಿದೆ.  ಸಮ್ಮೇಳನದ ವೇದಿಕೆ ಸ್ಥಳದಲ್ಲಿ ಕೆ.ಆರ್.ಎಸ್ ಅಣೆಕಟ್ಟೆ ಮಾದರಿಯ ಆಕರ್ಷಕ ಪ್ರವೇಶದ್ವಾರವನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನ ವೇದಿಕೆಯ ಈ ಪ್ರವೇಶ ದ್ವಾರದ ವಿನ್ಯಾಸವು 40 ಅಡಿ ಎತ್ತರ ಮತ್ತು ಬರೋಬ್ಬರಿ 300 ಅಡಿ ಅಗಲ ಇದೆ.

Recent Articles

spot_img

Related Stories

Share via
Copy link