ಗೂಂಡಾಗಳು ಸುವರ್ಣ ಸೌಧದೊಳಕ್ಕೆ ಹೇಗೆ ಬಂದರು? : ಹೆಚ್‌ ಡಿ ಕೆ

ಬೆಂಗಳೂರು:

    ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದನ್ನು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

   ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದಿದ್ದಾರೆ.

Recent Articles

spot_img

Related Stories

Share via
Copy link