ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ; 34 ವಿದ್ಯಾರ್ಥಿಗಳಿಗೆ ಗಾಯ!

ಕಾರವಾರ: 

    ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಕನಿಷ್ಠ 34 ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು. ಘಟನೆಯಲ್ಲಿ ಶಿಕ್ಷಕರು-ವಿದ್ಯಾರ್ಥಿಗಳು ಸೇರಿ ಸುಮಾರು 34 ಮಂದಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

   ಮೂಲಗಳ ಪ್ರಕಾರ ಕೋಲಾರ ಜಿಲ್ಲೆಯ, ಮಾಲೂರಿನ ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು, ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ತೆರಳಿದ್ದರು. ಈ ಪ್ರವಾಸದಲ್ಲಿ ಸುಮಾರು ಶಿಕ್ಷಕರು ಮತ್ತು ಸಿಬ್ಬಂದಿ ಜೊತೆ 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.

   ಬಸ್ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಬಳಿಯ ಆರೋಳ್ಳಿ ಕ್ರಾಸ್ ಬಳಿ ಚಲಿಸುತ್ತಿದ್ದಾಗ ಬಸ್​​ ಪಲ್ಟಿಯಾಗಿದೆ. ಈ ಘಟನೆಯಲ್ಲಿ 34 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಈ ಪೈಕಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ 4 ವಿಧ್ಯಾರ್ಥಿಗಳನ್ನು ಮಣಿಪಾಲ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಇನ್ನು ಉಳಿದ 34 ಜನ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯವಾಗಿದ್ದು. ಈ ವಿದ್ಯಾರ್ಥಿಗಳನ್ನು ಹೊನ್ನಾವರದ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Recent Articles

spot_img

Related Stories

Share via
Copy link